ಬೆಂಗಳೂರು: ರಾಜ್ಯದಲ್ಲಿ ಏಕಕಾಲಕ್ಕೆ 60 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ಕಾರ್ಯಾಚರಣೆ ನಡೆಸಲಾಗಿದೆ.
ಬೆಂಗಳೂರು, ಕಲಬುರಗಿ ಸೇರಿ ರಾಜ್ಯದ ಹಲವೆಡೆ ಭ್ರಷ್ಟ ತಿಮಿಂಗಿಲಗಳ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಕೆಎಎಸ್ ಅಧಿಕಾರಿ ನಾಗರಾಜ್ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಯಲಹಂಕದ ಸರ್ಕಾರಿ ಆಸ್ಪತ್ರೆ ಫಿಸಿಯೊಥೆರಪಿಸ್ಟ್ ರಾಜಶೇಖರ ಮನೆ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಬಿಎಂಪಿ ಅಧಿಕಾರಿ ಮಾಯಣ್ಣ ಸೇರಿದಂತೆ 15 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಬಗ್ಗೆ ದೂರು ಹಿನ್ನೆಲೆಯಲ್ಲಿ ಮಂಗಳೂರಿನ ಸ್ಮಾರ್ಟ್ ಸಿಟಿ ಇಂಜಿನಿಯರ್ ಕೆಎಸ್ ಲಿಂಗೇಗೌಡ, ಮಂಡ್ಯದ HLBC ಇಂಜಿನಿಯರ್ ಶ್ರೀನಿವಾಸ್, ದೊಡ್ಡಬಳ್ಳಾಪುರದ ಕಂದಾಯ ನಿರೀಕ್ಷಕ ಲಕ್ಷ್ಮೀನರಸಿಂಹಯ್ಯ, ಬೆಂಗಳೂರು ನಿರ್ಮಿತಿ ಕೇಂದ್ರದ ನಿವೃತ್ತ ಪ್ರಾಜೆಕ್ಟ್ ಮ್ಯಾನೇಜರ್ ವಾಸುದೇವ, ಗದಗ ಕೃಷಿ ಅಧಿಕಾರಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಕೃಷಿ ಇಲಾಖೆಯ ಅಧಿಕಾರಿ ಟಿಎಸ್ ರುದ್ರೇಶಪ್ಪ ನಿವಾಸದ ಮೇಲೆ ದಾಳಿ ನಡೆಸಲಾಗಿದ್ದು, ಅವರಿಗೆ ಸೇರಿದ ದಾವಣಗೆರೆ ನಿವಾಸದ ಮೇಲೆ ದಾಳಿ ಮಾಡಲಾಗಿದೆ.
ಬೈಲಹೊಂಗಲದಲ್ಲಿ ಸಹಕಾರ ಇಲಾಖೆ ಅಧಿಕಾರಿ ಮಸ್ತಿಯವರ ಮನೆಮೇಲೆ, ಗೋಕಾಕದಲ್ಲಿ ಆರ್ಟಿಓ ಅಧಿಕಾರಿ ಸದಾಶಿವ ಅವರ ಮನೆ ಮೇಲೆ ದಾಳಿ ಮಾಡಲಾಗಿದೆ. ಬೆಳಗಾವಿಯಲ್ಲಿ ಹೆಸ್ಕಾಂ ನೌಕರ ನೇತಾಜಿ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.