ಜನತೆಗೆ ಉಚಿತ ಪಡಿತರವನ್ನು ಒದಗಿಸುವ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಮುಂದಿನ ವರ್ಷದ ಮಾರ್ಚ್ ತಿಂಗಳವರೆಗೂ ವಿಸ್ತರಿಸುವ ಬಗ್ಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿಕೆ ನೀಡಿದ್ದಾರೆ.
ಕಳೆದ ವರ್ಷ ಕೋವಿಡ್ ಸಾಂಕ್ರಾಮಿಕ ಆರಂಭವಾದಾಗಿನಿಂದ ಸಾಮಾನ್ಯ ಜನತೆಗೆ ಆರ್ಥಿಕ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಫಲಾನುಭವಿಗಳಿಗೆ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು.
ಕೇಂದ್ರ ಸರ್ಕಾರ ಈ ಹಿಂದೆ ನೀಡಿದ ಗಡುವಿನ ಪ್ರಕಾರ ಈ ಯೋಜನೆಯು ನವೆಂಬರ್ 30 ರಂದು ಕೊನೆಗಾಣಬೇಕಿತ್ತು. ಆದರೆ ಇದೀಗ ಈ ಯೋಜನೆಯನ್ನು 2022ರ ಮಾರ್ಚ್ವರೆಗೂ ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಯೋಜನೆಯ ಅಡಿಯಲ್ಲಿ ದೇಶದ 80 ಕೋಟಿ ಜನತೆಗೆ ಸರ್ಕಾರವು 5 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ಸರಬರಾಜು ಮಾಡುತ್ತಿದೆ.
Breaking: ಮುಖೇಶ್ ಅಂಬಾನಿ ಹಿಂದಿಕ್ಕಿ ಏಷ್ಯಾದ ಶ್ರೀಮಂತ ವ್ಯಕ್ತಿ ಪಟ್ಟಕ್ಕೇರಿದ ಗೌತಮ್ ಅದಾನಿ
ಐದನೇ ಹಂತದ ಆಹಾರ ಧಾನ್ಯ ಸರಬರಾಜುಗೆ ಅಂದಾಜು 53344.52 ಕೋಟಿ ರೂಪಾಯಿ ಸಬ್ಸಿಡಿ ದೊರೆಯಲಿದೆ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಮಾಹಿತಿ ನೀಡಿದೆ. ಐದನೇ ಹಂತದಲ್ಲಿ ಒಟ್ಟು 163 ಲಕ್ಷ ಟನ್ ಆಹಾರ ಧಾನ್ಯಗಳನ್ನು ಸರಬರಾಜು ಮಾಡುವ ನಿರೀಕ್ಷೆ ಇದೆ.