ಬೆಂಗಳೂರು: ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್, ಮನರಂಜನಾ ಪಾರ್ಕ್ ಗಳಿಗೆ ಆಸ್ತಿ ತೆರಿಗೆಯಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 2021 -22 ನೇ ಸಾಲಿನ ಹಣಕಾಸು ವರ್ಷದಲ್ಲಿ ರೆಸ್ಟೋರೆಂಟ್, ಹೋಟೆಲ್, ಮನರಂಜನೆ ಪಾರ್ಕ್ ಗಳ ಆಸ್ತಿ ತೆರಿಗೆಯಲ್ಲಿ ವಿನಾಯಿತಿ ನೀಡಲಾಗಿದೆ. ಶೇಕಡ 50 ರಷ್ಟು ತೆರಿಗೆ ವಿನಾಯಿತಿ ನೀಡಲಾಗಿದ್ದು, ಉಳಿದ ಶೇಕಡ 50 ರಷ್ಟು ತೆರಿಗೆಯನ್ನು ಪಾವತಿಸಬೇಕಿದೆ. ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮಾಲೀಕರು ತೆರಿಗೆ ರಿಯಾಯಿತಿ ಪಡೆಯಲು ಅರ್ಜಿ ಸಲ್ಲಿಸಬೇಕಿದೆ.