ಬೆಂಗಳೂರು: ಪೇಜಾವರ ಶ್ರೀಗಳ ವಿರುದ್ಧ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಇಂದು ಪೊಲೀಸ್ ವಿಚಾರಣೆಗೆ ಹಾಜರಾಗಲಿದ್ದಾರೆ.
ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪೇಜಾವರ ಶ್ರೀಗಳು ದಲಿತರ ಮನೆಗೆ ಭೇಟಿ ನೀಡಿದ ಬಗ್ಗೆ ಪ್ರಸ್ತಾಪಿಸಿ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ನೀಡಲಾಗಿತ್ತು. ವಿಚಾರಣೆಗೆ ಹಾಜರಾಗಲು ಪೋಲೀಸರು ನೋಟಿಸ್ ನೀಡಿದ್ದರು. ಸಮಯಾವಕಾಶ ಕೇಳಿದ ಹಂಸಲೇಖ ಅವರು ಇಂದು ಮಧ್ಯಾಹ್ನ ವಿಚಾರಣೆಗೆ ಹಾಜರಾಗಲಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ಬಸವನಗುಡಿ ಠಾಣೆಗೆ ಹಂಸಲೇಖ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಹೇಳಲಾಗಿದೆ.