ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾದ ಭೂಮಿ ಪರಿವರ್ತನೆಗೆ ಮೊದಲು ಸರ್ಕಾರದಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕೆಂದು ಕಂದಾಯ ಇಲಾಖೆ ಆದೇಶಿಸಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸರ್ಕಾರದಿಂದ ಜಮೀನು ಮಂಜೂರು ಮಾಡಲಾಗಿದೆ. ಇದಕ್ಕೆ ಪೂರಕವಾಗಿ ಭೂರಹಿತರು ಆಗುವುದನ್ನು ತಪ್ಪಿಸುವ ಉದ್ದೇಶದಿಂದ ಕಡ್ಡಾಯವಾಗಿ ಪೂರರ್ವಾನುಮತಿ ಪಡೆಯಬೇಕೆಂದು ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆ ಆದೇಶಿಸಿದೆ.
ಕರ್ನಾಟಕ ಎಸ್ಸಿಎಸ್ಟಿ ಪಂಗಡಗಳ(ಕೆಲವು ಭೂಮಿಗಳ ಪರಭಾರೆ ನಿಷೇಧ) ಅಧಿನಿಯಮ 1978 ರ ಅನ್ವಯ ನಿರ್ಬಂಧ ವಿಧಿಸಲಾಗಿದೆ. ಕೆಲವರು ಸ್ವಹಿತಾಸಕ್ತಿಯಿಂದ ಕಾಯ್ದೆ ಉಲ್ಲಂಘಿಸಿ ಸರ್ಕಾರದಿಂದ ಅನುಮತಿ ಪಡೆದುಕೊಳ್ಳದ ಭೂ ಪರಿವರ್ತನೆ ಮಾಡಿ ಮಾರಾಟ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಯ್ದೆ ಒಳಪಡುವ ಜಮೀನುಗಳನ್ನು ಇನ್ನು ಮುಂದೆ ಭೂ ಪರಿವರ್ತನೆಗೆ ಮೊದಲು ಸರ್ಕಾರದಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಅನುಮತಿ ಪಡೆದ ನಂತರ ಭೂ ಪರಿವರ್ತನೆ ಮಾಡಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಕಂದಾಯ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.