ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ.
ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತ್ ಹಾಗೂ ಕಬ್ಬನ್ ಪಾರ್ಕ್ ಇನ್ಸ್ ಪೆಕ್ಟರ್ ಮಾರುತಿ ವಿರುದ್ಧ ತನಿಖೆ ನಡೆಸುವಂತೆ 8ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಮನೆ ಮನೆಗೂ ಬರಲಿದೆ ಕೋವಿಡ್ ಲಸಿಕೆ; 80 ವಾಹನಗಳಿಗೆ ಚಾಲನೆ ನೀಡಿದ BBMP
ರಮೇಶ್ ಜಾರಕಿಹೊಳಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ಥ ಯುವತಿ ದೂರು ನೀಡಿದ್ದರು. ಆದರೆ ಕಬ್ಬನ್ ಪಾರ್ಕ್ ಪೊಲೀಸರು ಎಫ್ ಐ ಆರ್ ದಾಖಲಿಸದೇ ನಿರ್ಭಯ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ ಎಂದು ಜನಾಧಿಕಾರ ಸಂಘರ್ಷ ಪರಿಷತ್ ಅಧ್ಯಕ್ಷ ಆದರ್ಶ ಅಯ್ಯರ್ ಪಿಸಿ ಆರ್ ದಾಖಲಿಸಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಇದೀದ ಮೂವರು ಪೊಲೀಸ್ ಅಧಿಕಾರಿಗಳನ್ನು ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ.