ಧಾರವಾಡ: ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಆರ್ಭಟ ಆರಂಭವಾದಂತಿದೆ. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಧಾರವಾಡದ ಸತ್ತೂರು ಬಡಾವಣೆಯಲ್ಲಿರುವ ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ 4 ವಿದ್ಯಾರ್ಥಿಗಳಲ್ಲಿ ಮೊದಲು ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. 300 ವಿದ್ಯಾರ್ಥಿಗಳನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಇದೀಗ 66 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.
ಪತ್ನಿಯನ್ನು ಹತ್ಯೆಗೈದ ಪಾಪಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ
ಸೋಂಕಿತ ವಿದ್ಯಾರ್ಥಿಗಳನ್ನು ಕಾಲೇಜಿನ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ವೈದ್ಯಕೀಯ ಕಾಲೇಜಿನ ಇನ್ನೂ 200 ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ತಿಳಿಸಿದ್ದಾರೆ.