ಮಂಗಳೂರು: ಗುತ್ತಿಗೆ ಆಧಾರದಲ್ಲಿ ನೇಮಕವಾದ ಯುವತಿಯರನ್ನು ಬೆದರಿಸಿ ವೈದ್ಯನೊಬ್ಬ ಕಿರಕುಳ ನೀಡಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯ ಈ ರೀತಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಯುವತಿಯರನ್ನು ಬಳಸಿಕೊಂಡು ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.
ಕೆಲಸದ ಸಂದರ್ಭದಲ್ಲಿ ಯುವತಿಯರನ್ನು ತೊಡೆ ಮೇಲೆ ಕೂರಿಸಿಕೊಂಡು ಚಕ್ಕಂದ ಆಡಿದ್ದಾನೆ. ಕಾಲು ಒತ್ತಿಸಿಕೊಂಡಿದ್ದಾನೆ. ಇದೇ ರೀತಿ ಆಸ್ಪತ್ರೆಯಲ್ಲಿ ಮಾತ್ರವಲ್ಲದೇ, ಯುವತಿಯರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯನ ಇಂತಹ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಉನ್ನತ ಹುದ್ದೆಯಲ್ಲಿರುವ ವೈದ್ಯ, ಆಸ್ಪತ್ರೆಗೆ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ್ದಾನೆ. ಹೇಳಿದಂತೆ ಕೇಳದಿದ್ದರೆ ಕೆಲಸದಿಂದ ತೆಗೆಯುವ ಮತ್ತು ಬೇರೆ ಕಡೆಗೆ ವರ್ಗಾಯಿಸುವುದಾಗಿ ಬೆದರಿಸಿದ್ದಾನೆ ಎನ್ನಲಾಗಿದ್ದು, ಆರೋಪಿ ವೈದ್ಯನ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.