alex Certify BIG NEWS: ಮತ್ತೆ ಕೊರೊನಾ ಅಟ್ಟಹಾಸ; ಬೆಂಗಳೂರು ಖಾಸಗಿ ಶಾಲೆಯಲ್ಲಿ 37 ಜನರಿಗೆ ಕೊರೊನಾ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ಕೊರೊನಾ ಅಟ್ಟಹಾಸ; ಬೆಂಗಳೂರು ಖಾಸಗಿ ಶಾಲೆಯಲ್ಲಿ 37 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ಮಳೆಯ ಅಬ್ಬರದ ನಡುವೆ ರಾಜ್ಯದಲ್ಲಿ ಮತ್ತೆ ಕರೋನಾ ಅಟ್ಟಹಾಸ ಆರಂಭವಾಗಿದೆ. ನಿನ್ನೆ ಧಾರವಾಡದ ಎಸ್ ಡಿಎಂ ವೈದ್ಯಕೀಯ ಕಾಲೇಜಿನ 68 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಇದೀಗ ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಯ 37 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.

ಸರ್ಜಾಪುರ ರಸ್ತೆಯಲ್ಲಿರುವ ದೊಡ್ಡಸಂದ್ರದ ಖಾಸಗಿ ಶಾಲೆಯಲ್ಲಿ 37 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 13ರಿಂದ 15 ವರ್ಷದ 33 ವಿದ್ಯಾರ್ಥಿಗಳು, ನಾಲ್ವರು ಶಾಲಾ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಈ ನಡುವೆ ಧಾರವಾಡದ ಮತ್ತೊಂದು ಎಸ್ ಡಿ ಎಂ ಮೆಡಿಕಲ್ ಕಾಲೇಜಿನ 182 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...