ಬೆಂಗಳೂರು: ಕೊರೊನಾ ಹೊಸ ರೂಪಾಂತರ ವೈರಸ್ ಭೀತಿ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲಾಡಳಿತಗಳ ಜೊತೆ ಇಂದು ಮಹತ್ವದ ಸಭೆ ನಡೆಸಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಸಭೆ ನಡೆಸಲಿದ್ದು, ಬೆಂಗಳೂರು ನಗರ ಸೇರಿದಂತೆ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
BIG BREAKING: SDM ಕಾಲೇಜಿನಲ್ಲಿ ಕೊರೊನಾ ಸ್ಫೋಟ; 281 ಜನರಿಗೆ ಕೋವಿಡ್ ಸೋಂಕು
ಈ ಕುರಿತು ಸ್ವತಃ ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದು, ರಾಜ್ಯದ ಕೆಲವೆಡೆಗಳಲ್ಲಿ ಕೊರೊನಾ ಸೋಕು ಹೆಚ್ಚುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಹಾಗೂ ಧಾರವಾಡ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು ಇಂದು 7 ಜಿಲ್ಲೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ಕೊರೊನಾ ಸೋಂಕು ಮತ್ತೆ ಉಲ್ಬಣಗೊಳ್ಳದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದರು.
ಈ ನಿಟ್ಟಿನಲ್ಲಿ ಬೆಂಗಳೂರು ನಗರ, ಧಾರವಾಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೂ ಸಭೆಗೆ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.