alex Certify ಬೆಂಗಳೂರಿನಿಂದ ಹೊರಟಿದ್ದ ಗೋ ಏರ್​ ವಿಮಾನದಲ್ಲಿ ತಾಂತ್ರಿಕ ದೋಷ: ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಿಂದ ಹೊರಟಿದ್ದ ಗೋ ಏರ್​ ವಿಮಾನದಲ್ಲಿ ತಾಂತ್ರಿಕ ದೋಷ: ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ

ಬೆಂಗಳೂರಿನಿಂದ ಪಾಟ್ನಾಗೆ 139 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಗೋ ಏರ್​ ವಿಮಾನದ ಇಂಜಿನ್​​ನಲ್ಲಿ ದೋಷ ಉಂಟಾದ ಹಿನ್ನೆಲೆಯಲ್ಲಿ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಳಗ್ಗೆ 11:15ರ ಸುಮಾರಿಗೆ ವಿಮಾನವು ತುರ್ತು ಭೂಸ್ಪರ್ಶ ಮಾಡಿದೆ.

ಗೋ ಏರ್​​ ವಿಮಾನದ ಪೈಲಟ್​ ನಾಗ್ಪುರ ಎಟಿಸಿಯನ್ನು ಸಂಪರ್ಕಿಸಿ ವಿಮಾನದ ಇಂಜಿನ್​ನಲ್ಲಿ ಸಮಸ್ಯೆ ಇದೆ ಎಂದು ಮಾಹಿತಿ ರವಾನಿಸಿದ್ದಾರೆ. ಅಲ್ಲದೇ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡುವಂತೆ ಮನವಿ ಮಾಡಿದ್ದಾರೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಅಬಿದ್​ ರೂಹಿ ಮಾಹಿತಿ ನೀಡಿದ್ರು. ಈ ವಿಮಾನದಲ್ಲಿ ಸಿಬ್ಬಂದಿಯನ್ನು ಹೊರತುಪಡಿಸಿ 139 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ತುರ್ತು ಪರಿಸ್ಥಿತಿ ಘೋಷಣೆ ಮಾಡುವ ಮೂಲಕ ತುರ್ತು ಭೂಸ್ಪರ್ಶಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದೆವು. ಅಗ್ನಿಶಾಮಕದಳ ಸಿಬ್ಬಂದಿ, ವೈದ್ಯರು, ಆ್ಯಂಬುಲೆನ್ಸ್​ ಹಾಗೂ ಪೊಲೀಸ್​ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದೃಷ್ಟವಶಾತ್​ ವಿಮಾನ ಸುರಕ್ಷಿತವಾಗಿ ಲ್ಯಾಂಡ್​ ಆಗಿದೆ ಎಂದು ರೂಹಿ ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...