ಮಧುರೈ: ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಸರ್ಕಾರಿ ಅನುದಾನಿತ ಶಾಲೆಯೊಂದರಲ್ಲಿ 30 ವರ್ಷದ ಶಿಕ್ಷಕನೊಬ್ಬ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಶಿಕ್ಷಕನನ್ನು ನಂದವನಪಟ್ಟಿ ನಿವಾಸಿ ನಾಥರಾಯನ್ ಎಂದು ಗುರುತಿಸಲಾಗಿದೆ. ಆರೋಪಿ ವಿವಾಹಿತನಾಗಿದ್ದು, ಇಂಗ್ಲಿಷ್ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾಥರಾಯನ್ ಒಂದು ವರ್ಷದ ಹಿಂದೆ ವಿದ್ಯಾರ್ಥಿನಿಯೊಂದಿಗೆ ಸಂಬಂಧ ಬೆಳೆಸಿದ್ದ. ಹುಡುಗಿಯನ್ನು ಮದುವೆಯಾಗುವ ನೆಪದಲ್ಲಿ ಅವನು ಅನೇಕ ಸಂದರ್ಭಗಳಲ್ಲಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಬಾಲಕಿಯ ಪೋಷಕರಿಗೆ ವಿಷಯ ತಿಳಿದ ನಂತರ ಪೊಲೀಸರಿಗೆ ದೂರು ದಾಖಲಿಸಲಾಗಿದೆ. ಶಿಕ್ಷಕನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ದಾಖಲಿಸಲಾಗಿದೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.