ಇಂಗ್ಲಿಷ್ ವರ್ಣಾಕ್ಷರ ಎ,ಬಿ,ಸಿ,ಡಿ ಬರೆಯಲು ಬಾರದ ಇಬ್ಬರು ಶಿಕ್ಷಕರನ್ನು ಸಸ್ಪೆಂಡ್ ಮಾಡಲಾಗಿದೆ. ಸಿಂದಗಿ ತಾಲೂಕಿನ ಗುಂದಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮತ್ತು ಶಿಕ್ಷಕಿ ಎ,ಬಿ,ಸಿ,ಡಿ ತಪ್ಪಾಗಿ ಬರೆದು ಅದೇ ಸರಿ ಎಂದು ಮಕ್ಕಳಿಗೆ ಹೇಳಿಕೊಡುತ್ತಿದ್ದರು.
ಇದರ ಬಗ್ಗೆ ಪೋಷಕರು ಮತ್ತು ಗ್ರಾಮಸ್ಥರು ಪ್ರಶ್ನಿಸಿದಾಗ, ಅವರೊಂದಿಗೆ ತಾವು ಬರೆದಿರುವುದೇ ಸರಿ ಎಂದು ವಾಗ್ವಾದ ನಡೆಸಿದ್ದರು. ಈ ಕುರಿತ ವಿಡಿಯೋ ವೈರಲ್ ಆಗಿದೆ. ಕ್ಷೇತ್ರಶಿಕ್ಷಣಾಧಿಕಾರಿಗಳು ಶಿಸ್ತು ಕ್ರಮಕ್ಕೆ ವರದಿ ಸಲ್ಲಿಸಿದ್ದರು. ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಈ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿದ್ದಾರೆನ್ನಲಾಗಿದೆ.