ಮೈಸೂರು: ಕಾಮುಕನೊಬ್ಬ ತನ್ನ ತಂಗಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಲು ಕಾರಣನಾದ ಘಟನೆ ಮೈಸೂರಿನಲ್ಲಿ ನಡೆದಿದೆ.
ಗಿರಿದರ್ಶಿನಿ ನಗರದಲ್ಲಿ ಇಂತಹ ಕೃತ್ಯವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಂದೆ-ತಾಯಿ ಕಳೆದುಕೊಂಡಿದ್ದ ಬಾಲಕಿಗೆ ಇಬ್ಬರು ಅಣ್ಣಂದಿರು ಮತ್ತು ಇಬ್ಬರು ಅಕ್ಕಂದಿರು ಇದ್ದಾರೆ. ಅಕ್ಕಂದಿರಿಗೆ ಮದುವೆಯಾಗಿದ್ದು, ಅಣ್ಣಂದಿರೊಂದಿಗೆ ವಾಸವಾಗಿದ್ದಳು.
ಆರೋಪಿಯ ಸ್ವಂತ ತಂಗಿ ಮೇಲೆ ಮೂರು ತಿಂಗಳಿನಿಂದ ಅತ್ಯಾಚಾರ ಎಸಗಿದ್ದಾನೆ. ಬಾಲಕಿಯನ್ನು ಚೆಲುವಾಂಬ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.