ಯುಕೆಯಲ್ಲಿ ಅರ್ವೆನ್ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಅನೇಕ ಕಡೆಗಳಲ್ಲಿ ಗಾಳಿ, ಮಳೆ, ಹಿಮದೊಂದಿಗೆ ಅಪ್ಪಳಿಸುತ್ತಿದೆ. ಕನಿಷ್ಠ ಮೂವರು ಬಲಿಯಾಗಿದ್ದು, ಸಾವಿರಾರು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕೆಲವು ಪ್ರದೇಶಗಳಲ್ಲಿ ಗಂಟೆಗೆ 160 ಕಿಮೀ ವೇಗದಲ್ಲಿ ಗಾಳಿ ಬೀಸಿದ್ದು, ಇದರಿಂದ ಹಲವಾರು ಅವಘಡಗಳು ಸಂಭವಿಸಿವೆ. ಇದೀಗ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯ ನೋಡಿದ್ರೆ ನೀವು ಬೆಚ್ಚಿ ಬೀಳುವುದರಲ್ಲಿ ಸಂಶಯವಿಲ್ಲ.
ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾದ ಒಂದು ಘಟನೆಯು ಆರ್ವೆನ್ ಚಂಡಮಾರುತದ ತೀವ್ರತೆಗೆ ಮರವೊಂದು ಉರುಳಿ ಬಿದ್ದಿದ್ದು, ಪಬ್ ಮ್ಯಾನೇಜರ್ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ನಡೆದಿದೆ.
ಶನಿವಾರ ಬೆಳಗ್ಗೆ ಬ್ರಿಜೆಂಡ್‌ನಲ್ಲಿರುವ ಪಬ್‌ನ ಹೊರಗೆ ಚೆರಿಲ್ ಪೌಂಡ್ ಎಂಬುವವರು ಸಿಗರೇಟ್ ಸೇದುತ್ತಿದ್ದರು. ಇನ್ನೇನು ಅಲ್ಲಿಂದ ಹೊರಡಬೇಕು ಅನ್ನುವಷ್ಟರಲ್ಲಿ, ಭಾರಿ ಗಾಳಿಗೆ ಪಕ್ಕದಲ್ಲಿದ್ದ ಮರವೊಂದು ಉರುಳಿ ಬಿದ್ದಿದೆ. ಅದೃಷ್ಟವಶಾತ್, ಕೆಲವೇ ಇಂಚುಗಳಷ್ಟು ದೂರದಲ್ಲಿ ಕುಸಿದಿದ್ದರಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.