ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 29 ರಿಂದ ಆರಂಭವಾಗಲಿದೆ. ಕೃಷಿ ಕಾಯ್ದೆ, ಬೆಲೆ ಏರಿಕೆ, ಪೆಗಾಸಸ್ ಬೇಹುಗಾರಿಕೆ, ಚೀನಾ ಗಡಿ ವಿವಾದ, ರಫೆಲ್ ಬಗ್ಗೆ ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷಗಳ ನಡುವೆ ವಾಕ್ಸಮರಕ್ಕೆ ವೇದಿಕೆ ಸಜ್ಜಾಗಿದೆ.
ಬಿಜೆಪಿ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿದ್ದು, ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಈಗಾಗಲೇ ತಯಾರಿ ಮಾಡಿಕೊಂಡಿವೆ. ಇದಕ್ಕೆ ಸರಿಯಾಗಿಯೇ ತಿರುಗೇಟು ನೀಡಲು ಬಿಜೆಪಿ ಕೂಡ ಸಜ್ಜಾಗಿದೆ. ಇಂದು ಕೃಷಿ ಕಾಯ್ದೆ ರದ್ದು ಪಡಿಸುವ ಮಸೂದೆಯನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಂಡಿಸಲಿದ್ದಾರೆ. ಲೋಕಸಭೆಯಲ್ಲಿ ಕೃಷಿ ಕಾಯ್ದೆ ರದ್ದುಪಡಿಸುವ ಮಸೂದೆಯನ್ನು ಮಂಡಿಸಿ ಅಂಗೀಕಾರ ಪಡೆಯುವ ಸಾಧ್ಯತೆ ಇದೆ. ಆದರೆ, ಈ ವಿಚಾರವಾಗಿ ಸುದೀರ್ಘ ಚರ್ಚೆ ನಡೆಸಲು ವಿಪಕ್ಷಗಳು ಮುಂದಾಗಿವೆ.