ಬೆಂಗಳೂರು: ಕೊರೊನಾ ಮೂರನೇ ಅಲೆ ಹಾಗೂ ಹೊಸ ರೂಪಾಂತರಿ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಮತ್ತೆ ಬಂದ್ ಆಗಲಿದೆಯೇ ಎಂಬ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಸ್ವತಃ ಶಿಕ್ಷಣ ಸಚಿವರು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದ ಕೆಲ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಆತಂಕಪಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸಧ್ಯಕ್ಕೆ ಶಾಲಾ-ಕಾಲೇಜು ಬಂದ್ ಮಾಡುವ ನಿರ್ಧಾರ ಇಲ್ಲ. ಸೋಂಕು ಹರಡದಂತೆ ಹಲವು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ನೆರೆಮನೆಯಾತನಿಂದ ಪದೇ ಪದೇ ಫೋನ್ ಕಾಲ್; ಬೇಸತ್ತ ವಿವಾಹಿತೆ ನೇಣಿಗೆ ಶರಣು
ಪೋಷಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ. ಮತ್ತೆ ಶಾಲೆ ಮುಚ್ಚುವ ನಿರ್ಧಾರ ಶಿಕ್ಷಣ ಇಲಾಖೆ ಮುಂದಿಲ್ಲ. ಕೋವಿಡ್ ಕೇಸ್ ಹೆಚ್ಚಾದರೆ ಸರ್ಕಾರದ ಸಲಹೆ ಪಡೆದು ನಿರ್ಧಾರ ಮಾಡಲಾಗುತ್ತದೆ. ಸರ್ಕಾರ ಹಾಗೂ ಆರೋಗ್ಯ ಇಲಾಖೆಯ ಜೊತೆ ಶಿಕ್ಷಣ ಇಲಾಖೆ ಸದಾ ಸಂಪರ್ಕದಲ್ಲಿರುತ್ತದೆ. ಹೀಗಾಗಿ ಯಾವುದೇ ಆತಂಕ ಬೇಡ ಎಂದರು.