alex Certify ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ….. ಯಾರೂ ಎಚ್ಚರ ತಪ್ಪದಿರಿ……! ಸರಣಿ ಟ್ವೀಟ್ ಮೂಲಕ ಸಲಹೆ ನೀಡಿದ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ….. ಯಾರೂ ಎಚ್ಚರ ತಪ್ಪದಿರಿ……! ಸರಣಿ ಟ್ವೀಟ್ ಮೂಲಕ ಸಲಹೆ ನೀಡಿದ ಕುಮಾರಸ್ವಾಮಿ

RSS running country, PM Modi is its puppet: HD Kumaraswamy - India Newsಬೆಂಗಳೂರು: ಕೋವಿಡ್ ಮೊದಲ ಅಲೆಯ ಆತಂಕ… ಎರಡನೇ ಅಲೆ ಸೃಷ್ಟಿಸಿದ ನರಕ ಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು ಅನುಭವಿಸಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ ಉಸಿರು ಚೆಲ್ಲಿದ ಜೀವಗಳನ್ನು ನೆನೆಸಿಕೊಂಡರೆ ಕಣ್ಣಂಚಿನ ಕಟ್ಟೆಯೊಡೆಯುತ್ತದೆ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ. ಯಾರೂ ಎಚ್ಚರ ತಪ್ಪದಿರಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಕೊರೊನಾ ಹೊಸ ತಳಿ ಒಮಿಕ್ರಾನ್ 30ಕ್ಕೂ ಹೆಚ್ಚು ರೂಪಾಂತರ ಹೊಂದಿರುವ ವರದಿ ಇದೆ. ಭಾರತವೂ ಸೇರಿ ಜಗತ್ತಿನ ವಿವಿಧ ದೇಶಗಳಲ್ಲಿ ಮಾರಕ ಮಾರಿ ಪುನಃ ಅಬ್ಬರಿಸುತ್ತಿದೆ. ಕೇಂದ್ರ ಸರ್ಕಾರ, ಏಮ್ಸ್ ವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಎಲ್ಲೆಡೆ ಕೆನ್ನಾಲಗೆ ಚಾಚಿರುವ ಕೊರೊನಾ ಹೊಸ ತಳಿಯನ್ನು ಎದುರಿಸಲು ನಮಗೊಂದಿಷ್ಟು ತಾಳ್ಮೆ ಬೇಕಿದೆ ಎಂದು ಸರಣಿ ಟ್ವೀಟ್ ಮೂಲಕ ಕುಮಾರಸ್ವಾಮಿ ತಿಳಿಸಿದ್ದಾರೆ.

ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ ಎಂದು ಪ್ರಾರ್ಥಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...