ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ನೀಡಿದ್ದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಾದಬ್ರಹ್ಮ ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.
ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಈ ಕುರಿತು ಹಂಸಲೇಖ ವಿರುದ್ಧ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗೆ ತಡೆ ಕೋರಿ ಗಂಗರಾಜು ಅಲಿಯಾಸ್ ಹಂಸಲೇಖ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಪ್ರಕರಣ ರದ್ದು ಮಾಡುವತೆ ಮನವಿ ಮಾಡಿದ್ದರು.
ನಿಸಾನ್ ಮ್ಯಾಗ್ನೈಟ್ ಗೆ ಭಾರತದಲ್ಲಿ 72 ಸಾವಿರಕ್ಕೂ ಅಧಿಕ ಬುಕ್ಕಿಂಗ್
ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ಪ್ರಕರಣದ ತನಿಖೆಗೆ ತಡೆ ನೀಡಿದ್ದು, ಪ್ರತಿವಾದಿಗಳಿಗೆ ನೋಟೀಸ್ ನೀಡಿದೆ. ಈ ಹಿನ್ನೆಲೆಯಲ್ಲಿ ನಾದಬ್ರಹ್ಮನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.