ತುಮಕೂರು: ಧಾರವಾಡದ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸ್ಫೋಟ ಬೆನ್ನಲ್ಲೇ ಇದೀಗ ತುಮಕೂರು ನರ್ಸಿಂಗ್ ಕಾಲೇಜಿನಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮೆರೆದಿದ್ದು, ಬರೋಬ್ಬರಿ 15 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.
ಈ ಕುರಿತು ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮಾಹಿತಿ ನೀಡಿದ್ದು, ಸಿದ್ದಗಂಗಾ ಹಾಗೂ ವರದಾ ನರ್ಸಿಂಗ್ ಕಾಲೇಜಿನ 15 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹೆಚ್ಚಿನ ಪರೀಕ್ಷೆಗಾಗಿ ವಿದ್ಯಾರ್ಥಿಗಳ ಸ್ಯಾಂಪಲ್ ನ್ನು ಬೆಂಗಳೂರು ಲ್ಯಾಬ್ ಗೆ ಕಳುಹಿಸಲಾಗಿದೆ. ಪ್ರಸ್ತುತ ಎಲ್ಲಾ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದರು.
ಕೋವಿಡ್ ಪಾಸಿಟಿವ್ ಬಂದ ಎಲ್ಲಾ ವಿದ್ಯಾರ್ಥಿಗಳು ಕೇರಳದಿಂದ ಬಂದವರಾಗಿದ್ದು, ಈ ಹಿನ್ನೆಲೆಯಲ್ಲಿ ಕೇರಳದಿಂದ ಬಂದ ಎಲ್ಲಾ ವಿದ್ಯಾರ್ಥಿಗಳ ಮೇಲೂ ನಿಗಾ ವಹಿಸಲಾಗಿದೆ ಎಂದು ಹೇಳಿದರು.