ಬೆಂಗಳೂರು: ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪಾರಿ ಕೇಸ್ ವಿಡಿಯೋ ಮಾಡಿದ್ದ ಕುಳ್ಳ ದೇವರಾಜ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ರಾಜಾನುಕುಂಟೆ ಠಾಣೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ್ದ ಬಗ್ಗೆ ಹಾಗೂ ಕುಳ್ಳ ದೇವರಾಜ್ ಗೆ ಸುಪಾರಿ ನೀಡುತ್ತಿದ್ದ ವಿಡಿಯೋ ಬಹಿರಂಗವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಆರೋಪಿ ಕುಳ್ಳ ದೇವರಾಜ್ ನನ್ನು ವಶಕ್ಕೆ ಪಡೆದು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಿದ್ದರು.
ತನ್ನ ಹತ್ಯೆಗೆ ಸಂಚು ರೂಪಿಸಿದ್ದ ಬಗ್ಗೆ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಗೋಪಾಲಕೃಷ್ಣ ಹಾಗೂ ಕುಳ್ಳ ದೇವರಾಜ್ ವಿರುದ್ಧ ರಾಜಾನುಕುಂಟೆ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಕುಳ್ಳ ದೇವರಾಜ್ ನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ರಾಜಾನುಕುಂಟೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.