ಬೆಂಗಳೂರು: ರಾಜ್ಯದಲ್ಲಿ ಇಬ್ಬರಿಗೆ ಒಮಿಕ್ರಾನ್ ದೃಢಪಟ್ಟ ಹಿನ್ನೆಲೆಯಲ್ಲಿ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.
ತಜ್ಞರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ತಜ್ಞರೊಂದಿಗೆ ಸಭೆ ನಡೆಸಲಿರುವ ಸಿಎಂ ವಿದೇಶಗಳ ಪ್ರಯಾಣಿಕರಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಏರ್ಪೋರ್ಟ್ ನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯ ಬಳಿಕ ಮಾರ್ಗಸೂಚಿ ಪ್ರಕಟಿಸಲಾಗುವುದು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಚರ್ಚಿಸಲು ಕಂದಾಯ, ಆರೋಗ್ಯ ಇಲಾಖೆ ಸಚಿವರು, ಮುಖ್ಯ ಕಾರ್ಯದರ್ಶಿಗಳು, ಅಭಿವೃದ್ಧಿ ಆಯುಕ್ತರು, ಬಿಬಿಎಂಪಿ ಆಯುಕ್ತರು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಆಯುಕ್ತರು, ವಿಪತ್ತು ನಿರ್ವಹಣ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಏರ್ ಪೋರ್ಟ್ ನೋಡಲ್ ಅಧಿಕಾರಿ, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರು, ಕೋವಿಡ್ ಸಲಹಾ ಸಮಿತಿಯ ಅಧ್ಯಕ್ಷರು, ಸದಸ್ಯರು ಸಭೆಗೆ ಭಾಗವಹಿಸಲು ಸಿಎಂ ಕಚೇರಿಯಿಂದ ಮಾಹಿತಿ ನೀಡಲಾಗಿದೆ.
ರಾಜ್ಯದಲ್ಲಿ ಸೋಂಕು ನಿಯಂತ್ರಣಕ್ಕೆ ಟಫ್ ರೂಲ್ಸ್ ಜಾರಿ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಭೆಯ ಬಳಿಕ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.