ರಾಜ್ಯದಲ್ಲಿ ಓಮಿಕ್ರಾನ್ ರೂಪಾಂತರಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗಿದೆ. ಓಮಿಕ್ರಾನ್ ಸೋಂಕು ಹೆಚ್ಚು ವ್ಯಾಪಿಸದಂತೆ ತಡೆಯುವ ಸಲುವಾಗಿ ರಾಜ್ಯ ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಕೋವಿಡ್ ಸೋಂಕಿನ ತಡೆಗಾಗಿ ಪಂಚ ಸೂತ್ರವನ್ನು ಅಳವಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ . ಪರೀಕ್ಷೆ – ಟ್ರ್ಯಾಕ್ – ಚಿಕಿತ್ಸೆ ಹಾಗೂ ಲಸಿಕೆ ಅಭಿಯಾನಕ್ಕೆ ಚುರುಕು ಮುಟ್ಟಿಸುವುದೇ ಈ ಪಂಚ ಸೂತ್ರವಾಗಿದೆ.
ಸಾರ್ವಜನಿಕ ಸಭೆ ಸಮಾರಂಭ ಸೇರಿದಂತೆ ಯಾವುದೇ ಕಾರ್ಯಕ್ರಮಗಳಲ್ಲಿ ಜನರ ಮಿತಿಯನ್ನು 500ಕ್ಕೆ ಸೀಮಿತಗೊಳಿಸಲಾಗಿದೆ. ಅಲ್ಲದೇ ಕಾರ್ಯಕ್ರಮದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಕಡ್ಡಾಯವಾಗಿದೆ.
15 ಜನವರಿಯವರೆಗೂ ಶಾಲಾ – ಕಾಲೇಜುಗಳಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಚರಿಸುವಂತಿಲ್ಲ.
ಕರ್ನಾಟಕದ ನಂತ್ರ ದೆಹಲಿಗೆ ಒಮಿಕ್ರಾನ್ ಎಂಟ್ರಿ…..! ಆಸ್ಪತ್ರೆಗೆ ಸೇರಿದ 12 ಶಂಕಿತ ರೋಗಿಗಳು
18 ವರ್ಷದ ಒಳಗಿನ ವಿದ್ಯಾರ್ಥಿಗಳ ಪೋಷಕರು ಎರಡು ಡೋಸ್ ಕೋವಿಡ್ ಲಸಿಕೆಯನ್ನು ಸ್ವೀಕರಿಸುವುದು ಕಡ್ಡಾಯವಾಗಿದೆ.
ಆರೋಗ್ಯ ಕಾರ್ಯಕರ್ತರು, 65 ವರ್ಷದ ಮೇಲ್ಪಟ್ಟವರು ಹಾಗೂ ಅನಾರೋಗ್ಯಕ್ಕೆ ಒಳಗಾದವರಿಗೆ ಕಡ್ಡಾಯವಾಗಿ ಪರೀಕ್ಷೆ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ.
ಮಾಲ್ ಗಳು, ಸಿನಿಮಾ ಮಂದಿರ ಹಾಗೂ ಥಿಯೇಟರ್ಗಳಿಗೆ ಎರಡು ಡೋಸ್ ಲಸಿಕೆಗಳನ್ನು ಸ್ವೀಕರಿಸಿದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ.
ಸರ್ಕಾರಿ ಸಿಬ್ಬಂದಿಯು ಕೋವಿಡ್ ಲಸಿಕೆಯ ಎರಡು ಡೋಸ್ಗಳನ್ನು ಸ್ವೀಕರಿಸಿರುವುದು ಕಡ್ಡಾಯವಾಗಿದೆ.
ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಮಾಸ್ಕ್ ಧರಿಸದೇ ಹೋದಲ್ಲಿ ನಗರ ಪ್ರದೇಶಗಳಲ್ಲಿ 250 ರೂಪಾಯಿ ದಂಡ ಹಾಗೂ ಇನ್ನುಳಿದ ಪ್ರದೇಶಗಳಲ್ಲಿ 100 ರೂಪಾಯಿ ದಂಡ ವಿಧಿಸಲಾಗುತ್ತದೆ. ಗಡಿ ಪ್ರದೇಶಗಳಲ್ಲಿ ಹದ್ದಿನ ಕಣ್ಣಿಡುವುದು ಆಯಾ ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.