ಹೈದರಾಬಾದ್ : ದೇಶದಲ್ಲಿ ಓಮಿಕ್ರಾನ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆತಂಕ ಮನೆ ಮಾಡುತ್ತಿದೆ. ಸದ್ಯ ಬೇರೆ ರಾಷ್ಟ್ರಗಳಿಂದ ದೇಶಕ್ಕೆ ಆಗಮಿಸಿದ 12 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಹೀಗಾಗಿ ಆತಂಕ ಮತ್ತಷ್ಟು ಹೆಚ್ಚಾಗುತ್ತಿದೆ.
ಕೆನಡಾ, ಯುಎಸ್, ಸಿಂಗಾಪೂರ ಹಾಗೂ ಬ್ರಿಟನ್ ನಿಂದ ಬಂದಿದ್ದ 12 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸದ್ಯ ಅವರೆಲ್ಲರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾದರಿಗಳನ್ನು ಜೀನೋಮ್ ಅನುಕ್ರಮಕ್ಕೆ ಕಳುಹಿಸಲಾಗಿದೆ. ಅವರಲ್ಲಿ ಓಮಿಕ್ರಾನ್ ಕಾಣಿಸದಿದ್ದರೆ ಹೋಮ್ ಐಸೋಲೇಶನ್ ಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಒಂದು ವೇಳೆ ಅವರಲ್ಲಿ ಓಮಿಕ್ರಾನ್ ಸೋಂಕು ಇರುವುದು ಕಂಡು ಬಂದಲ್ಲಿ, ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.