ಕೋಲಾರ : ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷವು ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎಂಬುವುದನ್ನು ಭಾನುವಾರದೊಳಗೆ ತೀರ್ಮಾನ ಮಾಡಲಾಗುವುದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಜಿಲ್ಲೆಯಲ್ಲಿ ಇಂದು ಪ್ರಚಾರ ಕೈಗೊಂಡ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ನಮ್ಮ ಬೆಂಬಲ ಕೇಳಿರುವುದು ನಿಜ. ಇನ್ನೂ ಸಮಯ ಇದೆ, ಆತುರದಲ್ಲಿ ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲುವ ಗುರಿ ನಮ್ಮ ಪಕ್ಷದ್ದಾಗಿದೆ. ಹೀಗಾಗಿ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸದ್ಯದ ಮಾಹಿತಿಯಂತೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.