ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 20 ಸ್ಥಾನಗಳಲ್ಲಿ ಕನಿಷ್ಟ 15 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು ಬಿಜೆಪಿ ಸರ್ಕಾರವು ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಗುಡುಗಿದ್ರು.
ಜಲಜನಕದಿಂದ ಓಡುವ ಕಾರು ಖರೀದಿ ಮಾಡಿದ ನಿತಿನ್ ಗಡ್ಕರಿ
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಪ್ರಧಾನಿ ಮೋದಿ ಭೇಟಿ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡುತ್ತಿದೆ. ಆದರೆ ಕೆಲವು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಥಳೀಯ ನಾಯಕರು ಕಾಂಗ್ರೆಸ್ಗೆ ಬೆಂಬಲ ನೀಡಿದ್ದಾರೆ ಎಂದು ಹೇಳಿದ್ರು.
ಸಿಎಂ ಬದಲಾವಣೆ ವಿಚಾರದಲ್ಲಿ ಸಚಿವ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಈಶ್ವರಪ್ಪ ಒಮ್ಮೊಮ್ಮೆ ಬಾಯಿತಪ್ಪಿ ಸತ್ಯ ಹೇಳಿಬಿಡ್ತಾರೆ. ಅವರಿಗೆ ಸಿಎಂ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಈಶ್ವರಪ್ಪ ಇಂತಹ ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ರು.
ಅಡುಗೆ ಮನೆಯೊಳಗೆ ಅಡಗಿ ಕುಳಿತಿದ್ದ ಹಾವಿನ ರಕ್ಷಣೆ: ಹಳೆ ವಿಡಿಯೋ ಮತ್ತೆ ವೈರಲ್
ಪೊಲೀಸ್ ಅಧಿಕಾರಿಗಳನ್ನು ದೂರವಾಣಿ ಕರೆ ಮೂಲಕ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ, ಗೃಹ ಇಲಾಖೆ ನಿರ್ವಹಣೆ ಮಾಡಲು ಸಾಧ್ಯವಾಗದೇ ಹೋದಲ್ಲಿ ಆರಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಅವರ ಇಲಾಖೆ ಭ್ರಷ್ಟಾಚಾರದಿಂದ ಕೊಳೆತು ನಾರುತ್ತಿದೆ ಎಂಬುದು ಆರಗ ಜ್ಞಾನೇಂದ್ರರಿಗೆ ಮನವರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಈ ರೀತಿಯ ಹೇಳಿಕೆ ನೀಡ್ತಿದ್ದಾರೆ ಎಂದು ಹೇಳಿದ್ರು.