ಬೆಂಗಳೂರು: ರಾಜ್ಯದ ಶಾಲೆ ಕಾಲೇಜುಗಳಲ್ಲಿ 13 ದಿನದಲ್ಲಿ 543 ವಿದ್ಯಾರ್ಥಿಗಳು, ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದೆ.
ಶಾಲೆ-ಕಾಲೇಜುಗಳಲ್ಲಿ ಸೋಂಕು ತೀವ್ರವಾಗಿ ಹಬ್ಬುತ್ತಿದೆ. ಸೋಮವಾರ 42 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಕಳೆದ 13 ದಿನದ ಅವಧಿಯಲ್ಲಿ 543 ಜನರಿಗೆ ಸೋಂಕು ತಗುಲಿದೆ. ಶಾಲೆ, ಕಾಲೇಜುಗಳಲ್ಲಿ ಸೋಂಕು ತೀವ್ರವಾಗಿ ಹಬ್ಬುತ್ತಿದ್ದು ಪೋಷಕರಲ್ಲಿ ಆತಂಕ ಎದುರಾಗಿದೆ.
ತುಮಕೂರಿನಲ್ಲಿ ನರ್ಸಿಂಗ್ ಕಾಲೇಜುಗಳಲ್ಲಿ ಕೊರೋನಾ ಹೆಚ್ಚಾಗಿದೆ. ಅದೇ ರೀತಿ ಚಿಕ್ಕಮಗಳೂರು ವಸತಿ ಶಾಲೆಯಲ್ಲಿ ಸೋಂಕು ಹೆಚ್ಚಿದೆ. ಮಂಗಳೂರಿನ ಕಾಲೇಜಿನಲ್ಲಿ ಸೋಂಕು ಹೆಚ್ಚಾಗಿದೆ. 9 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಹಾಸ್ಟೆಲ್ ಅನ್ನು ಕಂಟೈನ್ಮೆಂಟ್ ಜೋನ್ ಆಗಿ ಘೋಷಿಸಲಾಗಿದೆ. ಮೈಸೂರಿನಲ್ಲಿ 5 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ಧಾರವಾಡದ ಎಸ್ಡಿಎಂ ಕಾಲೇಜಿನಲ್ಲಿ ಕೊರೋನಾ ದಾಳಿ ಮಾಡಿತ್ತು. ಈಗ ಕಡಿಮೆಯಾಗಿದೆ.