ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಮೀನು ಮಾರಾಟ ಮಾಡುತ್ತಿದ್ದ ಮೂವರಿಗೆ ಚೂರಿಯಿಂದ ಇರಿಯಲಾಗಿದೆ.
ಮೋಹನ್, ಮಹೇಶ್ ಮತ್ತು ಅಶೋಕ್ ಅವರ ಮೇಲೆ ದಾಳಿ ಮಾಡಿ ಚೂರಿಯಿಂದ ಇರಿಯಲಾಗಿದೆ. ಬೈಕ್ ನಲ್ಲಿ ಬಂದ ಮುಸುಕುಧಾರಿಗಳು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಳಂತಿಲದಲ್ಲಿ ಮೊನ್ನೆ ನಡೆದಿದ್ದ ಘಟನೆಗೆ ಪ್ರತೀಕಾರವಾಗಿ ಈ ಕೃತ್ಯ ನಡೆದಿರಬಹುದೆಂದು ಶಂಕಿಸಲಾಗಿದೆ. ಪೊಲೀಸರು ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.