alex Certify ಸರ್ಕಾರಿ ಬಸ್​ನಲ್ಲಿ ವಿದ್ಯಾರ್ಥಿಗಳ ಹುಚ್ಚು ಸಾಹಸ…..! ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ ಈ ವಿಡಿಯೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಬಸ್​ನಲ್ಲಿ ವಿದ್ಯಾರ್ಥಿಗಳ ಹುಚ್ಚು ಸಾಹಸ…..! ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ ಈ ವಿಡಿಯೋ

ಶಾಲಾ ವಿದ್ಯಾರ್ಥಿಗಳ ಗುಂಪೊಂದು ಬಸ್​​​​ನಲ್ಲಿ ಹುಚ್ಚು ಸಾಹಸವನ್ನು ಪ್ರದರ್ಶಿಸಿದ್ದು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿದೆ. ಚೆನ್ನೈನ ಎಂಟಿಸಿ ಬಸ್​ನಲ್ಲಿ ವಿದ್ಯಾರ್ಥಿಗಳು ಈ ರೀತಿ ಹುಚ್ಚಾಟ ಮೆರೆದಿದ್ದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ವೈರಲ್​​ ಆಗುತ್ತಿದ್ದಂತೆಯೇ ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ತನಿಖೆಗೆ ಮುಂದಾಗಿದ್ದಾರೆ. ನಾವು ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಲು ಯತ್ನಿಸುತ್ತಿದ್ದೇವೆ ಹಾಗೂ ಅವರಿಗೆ ಈ ರೀತಿಯ ಹುಚ್ಚು ಸಾಹಸಗಳಿಂದಾಗಿ ಉಂಟಾಗಬಲ್ಲ ದುರಂತಗಳ ಬಗ್ಗೆ ಅರಿವು ಮೂಡಿಸುತ್ತೇವೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬಸ್ಸಿನ ಹಿಂಭಾಗದಲ್ಲಿ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಈ ವಿಡಿಯೋವನ್ನು ಸೆರೆಹಿಡಿದಿದ್ದಾರೆ. ವಿಡಿಯೋದಲ್ಲಿ ಕಾಲೇಜು ವಿದ್ಯಾರ್ಥಿಗಳು ಬಸ್​ನ ಹಿಂಭಾಗದ ಬಾಗಿಲಿನಲ್ಲಿ ನೇತಾಡುತ್ತಿರೋದನ್ನು ಕಾಣಬಹುದಾಗಿದೆ. ಇದರಲ್ಲಿ ಒಬ್ಬರು ಬಸ್​ನ ಮೇಲ್ಭಾಗವನ್ನು ಹತ್ತಿದರೆ ಇನ್ನುಳಿದವರು ಬಸ್​ನ ಬಾಗಿಲಲ್ಲೇ ಸಾಹಸ ಮಾಡಿದ್ದಾರೆ.

ಈ ಘಟನೆಯ ಸಂಬಂಧ ನಾವು ದೂರನ್ನು ಸ್ವೀಕರಿಸಿದ್ದೇವೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಆದಷ್ಟು ಬೇಗ ವಿದ್ಯಾರ್ಥಿಗಳನ್ನು ಸೆರೆಹಿಡಿಯಲಾಗುತ್ತೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

— TOIChennai (@TOIChennai) December 6, 2021

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...