ಕಾರವಾರ: ಪೊಲಿಸ್ ಕಾನ್ಸ್ ಟೇಬಲ್ ಓರ್ವರು ಡಿಆರ್ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
35 ವರ್ಷದ ಗುರುಪ್ರಸಾದ್ ನಾಯ್ಕ್ ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ. ಕಾರವಾರದ ಡಿಆರ್ ಕಚೇರಿಯಲ್ಲಿಯೇ ಕಾನ್ಸ್ ಟೇಬಲ್ ನೇಣಿಗೆ ಕೊರಳೊಡ್ಡಿದ್ದಾರೆ. ಗುರುಪ್ರಸಾದ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.