alex Certify ಹೆರಿಗೆಗೆ ಹೋದ ಪತ್ನಿ, ನಾದಿನಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಪಾಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆರಿಗೆಗೆ ಹೋದ ಪತ್ನಿ, ನಾದಿನಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಪಾಪಿ

ಮೈಸೂರು: ಪತ್ನಿ ಹೆರಿಗೆಗೆ ತವರಿಗೆ ಹೋಗುತ್ತಿದ್ದಂತೆ ಕಾಮುಕನೊಬ್ಬ ನಾದಿನಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಾರೋಪುರ ಗ್ರಾಮದಲ್ಲಿ ನಡೆದಿದೆ.

ಬಾಲಕಿಯ ತಾಯಿಗೆ ಅನುಮಾನ ಬಂದಿದೆ. ಮಗಳಿಗೆ ಮಂತ್ಲಿ ಪಿರಿಯಡ್ಸ್ ನಿಂತಿದ್ದು, ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯರಿಗೆ ತೋರಿಸಿದಾಗ 7ತಿಂಗಳ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ನಂತರ ನೀಚ ಕೃತ್ಯದ ವಿಚಾರ ಬಯಲಾಗಿದೆ.

ಆಸ್ಪತ್ರೆಯ ವೈದ್ಯರು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಹಾರೋಪುರ ಗ್ರಾಮದಲ್ಲಿ ಬಾಲಕಿ ಮತ್ತು ಆಕೆಯ ಕುಟುಂಬದವರ ಹೇಳಿಕೆ ಪಡೆದುಕೊಂಡು ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆಯ ಬಳಿಕ ಆರೋಪಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಿಳಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

26 ವರ್ಷದ ಆರೋಪಿಯ ಪತ್ನಿ ಹೆರಿಗೆಗೆಂದು ತವರು ಮನೆಗೆ ಹೋಗಿದ್ದು, ಸಂಬಂಧದಲ್ಲಿ ನಾದಿನಿ ಆಗಬೇಕಿದ್ದ ಅಪ್ರಾಪ್ತೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಹೋಗುತ್ತಿದ್ದ ಆರೋಪಿ ತಬ್ಬಿಕೊಂಡು ಫೋಟೋ ತೆಗೆದುಕೊಂಡಿದ್ದೇನೆ. ಸಂಬಂಧಿಕರಿಗೆ ಫೋಟೋ ತೋರಿಸುವುದಾಗಿ ಬ್ಲಾಕ್ಮೇಲ್ ಮಾಡಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಬಾಲಕಿಯ ತಾಯಿಗೆ ಅನುಮಾನ ಬಂದು ಆಸ್ಪತ್ರೆಗೆ ಕರೆದೊಯ್ದಾಗ ವಿಚಾರ ಗೊತ್ತಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...