ರಾಯಚೂರು: ಅಡುಗೆ ಅನಿಲ ಸಿಲಿಂಡರ್ ಅನ್ನು ಮನೆಗೆ ಸರಬರಾಜು ಮಾಡುವ ಹುಡುಗರಿಗೆ ಗ್ರಾಹಕರು ಪ್ರತ್ಯೇಕ ಶುಲ್ಕ ನೀಡುವಂತಿಲ್ಲ. ಬಿಲ್ ನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ಕೋರಲಾಗಿದೆ.
ಗ್ಯಾಸ್ ಏಜೆನ್ಸಿಗಳು ಗೃಹ ಬಳಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡುವುದು ಗ್ಯಾಸ್ ಏಜೆನ್ಸಿಗಳ ಜವಬ್ದಾರಿ. ಆದ್ದರಿಂದ ಯಾವುದೇ ಕಾರಣಕ್ಕೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕರ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡುವಂತಿಲ್ಲ, ಸಿಲಿಂಡರನ್ನು ಮನೆಗೆ ತಲುಪಿಸುವ ಸಂದರ್ಭದಲ್ಲಿ ಯಾವುದೇ ಡೆಲಿವರಿ ಹುಡುಗ ಸಾರ್ವಜನಿಕರಲ್ಲಿ ಬಿಲ್ಲಿನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ಕೇಳ್ಳಿದಲ್ಲಿ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಕಚೇರಿಗೆ ಹಾಗೂ ದೂರವಾಣಿ ಸಂಖ್ಯೆ 08532-231678 ಮತ್ತು ತಹಶೀಲ್ದಾರ್ ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.