ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ಸಿವಿಲ್ ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡುವಾಗ ರಿಕ್ತ ಸ್ಥಾನ ಆಧಾರಿತ ವರ್ಗೀಕರಣದ ಬದಲಾಗಿ ಹುದ್ದೆ ಆಧಾರಿತ ವರ್ಗೀಕರಣ ಮಾಡಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಒತ್ತಾಯಕ್ಕೆ ಮಣಿದ ಸರ್ಕಾರದಿಂದ ಈ ಕುರಿತಾಗಿ ಆದೇಶ ಹೊರಡಿಸಲಾಗಿದೆ. ಸರ್ಕಾರಿ ನೌಕರರಿಗೆ ಬಡ್ತಿ ನೀಡುವಾಗ ಇದ್ದ ಕಾನೂನಾತ್ಮಕ ತೊಡಕುಗಳನ್ನು ಸರ್ಕಾರ ನಿವಾರಿಸಿದ್ದು, ಪದೋನ್ನತಿಯ ಅವಕಾಶ ಕಲ್ಪಿಸಲಾಗಿದೆ.
ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಾಗ ಖಾಲಿ ಇದ್ದ ಸ್ಥಾನ ಆಧಾರಿತ ವರ್ಗೀಕರಣದ ಬದಲಿಗೆ ಮಂಜೂರಾದ ಹುದ್ದೆ ಆಧಾರಿತ ವರ್ಗೀಕರಣವನ್ನು ಅನುಸರಿಸಬೇಕೆಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಇದರಿಂದಾಗಿ ಪ್ರತಿ ಇಲಾಖೆಯ ಶೇಕಡ 20 ರಿಂದ 30ರಷ್ಟು ನೌಕರರಿಗೆ ಮುಂಬಡ್ತಿ ಅವಕಾಶಗಳು ಸಿಗಲಿವೆ ಎಂದು ಹೇಳಲಾಗಿದೆ.