ಬೆಳಗಾವಿ: ಡಿಸೆಂಬರ್ 13ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಬಾರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆದಿದ್ದು, ಭದ್ರತೆಗಾಗಿ 4 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಅಧಿವೇಶನಕ್ಕೆ ಆರ್ ಟಿ ಪಿಸಿ ಆರ್ ಟೆಸ್ಟ್ ನೆಗೆಟಿವ್ ವರದಿ ಕಡ್ಡಾಯವಾಗಿದ್ದು, ಪ್ರತಿಯೊಬ್ಬರಿಗೂ 72 ಗಂಟೆ ಒಳಗಿನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
BREAKING: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆ
ಇನ್ನು ಅಧಿವೇಶನಕ್ಕೆ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಓರ್ವ ನಗರ ಪೊಲೀಸ್ ಆಯುಕ್ತ, ಇಬ್ಬರು ಡಿಸಿಪಿ, 15 ಎಸ್ ಪಿ, 35 ಡಿ ವೈಎಸ್ ಪಿ, 100 ಸಿಪಿಐ, 250 ಪಿ ಎಸ್ ಐ, ಹೋಮ್ ಗಾರ್ಡ್ಸ್ ಸೇರಿದಂತೆ ನಾಲ್ಕು ಸಾವಿರಕ್ಕೂ ಅಧಿಕ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.
ಇದೇ ಮೊದಲ ಬಾರಿಗೆ ಪೊಲೀಸ್ ವಾಸ್ತವ್ಯಕ್ಕೆ ಜರ್ಮನ್ ಮಾದರಿಯ ಟೌನ್ ಶಿಪ್ ನಿರ್ಮಾಣ ಮಾಡಲಾಗಿದೆ. ಮೂರು ಟೆಂಟ್ ಗಳಲ್ಲಿ 1800 ಸಿಬ್ಬಂದಿಗಳಿಗೆ ಬೆಡ್ ವ್ಯವಸ್ಥೆ ಮಾಡಲಾಗಿದೆ. ಸಾಂಬ್ರಾ ಟ್ರೈನಿಂಗ್ ಸ್ಕೂಲ್ ನಲ್ಲಿ 500, ಮರಾಠ ರೆಜಿಮೆಂಟ್ ನಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ವ್ಯವಸ್ಥೆ ಮಾಡಲಾಗಿದೆ.