ಮೈಸೂರು: ಜೆಡಿಎಸ್ ನವರು 4 -5 ಜಿಲ್ಲೆಗಳಲ್ಲಿ ಮಾತ್ರ ಓಡಾಡಿಕೊಂಡಿದ್ದಾರೆ ಎಂದು ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ಸಿದ್ದರಾಮಯ್ಯನಹುಂಡಿಯಲ್ಲಿ ಮಾತನಾಡಿದ ಅವರು, ಮೈಸೂರು, ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ತುಮಕೂರು ಜಿಲ್ಲೆಗಳಲ್ಲಿ ಮಾತ್ರ ಜೆಡಿಎಸ್ ನವರು ಕಾಣಿಸುತ್ತಾರೆ. 2023ಕ್ಕೆ ಅಧಿಕಾರಕ್ಕೆ ಬರುತ್ತೇವೆ ಎಂದು ಜೆಡಿಎಸ್ ನವರು ಹೇಳುತ್ತಿದ್ದಾರೆ. ನಾನು ಮುಖ್ಯಮಂತ್ರಿಯಾದ ನಂತರ ನಡೆದ ಚುನಾವಣೆಯಲ್ಲಿ ಜೆಡಿಎಸ್ ನವರು 59 ಸ್ಥಾನ ಗೆದ್ದಿದ್ದರು, ಬಳಿಕ ಸಂಖ್ಯೆ ಇಳಿಯುತ್ತಿದೆ. ಯಾವುದೇ ಸಿದ್ಧಾಂತವಿಲ್ಲ ಯಾರ ಜೊತೆಗೆ ಬೇಕಾದರೂ ಹೋಗುತ್ತಾರೆ ಎಂದು ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.