ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ನಿರ್ಬಂಧ ಸಡಿಲ ಮಾಡಲಾಗಿದೆ. ಈ ಹಿಂದೆ ಸ್ಥಳೀಯ ಆಡಳಿತದಿಂದ ಎನ್.ಒ.ಸಿ. ಪಡೆಯುವುದು ಕಡ್ಡಾಯವಾಗಿತ್ತು. ಇದರಿಂದ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಯಾರಿಗೆ ಮನೆ ಇದೆಯೋ ಅವರೆಲ್ಲರಿಗೂ ವಿದ್ಯುತ್ ಸಂಪರ್ಕ ನೀಡಬೇಕು ಎಂದು ಹೇಳಲಾಗಿದೆ.
ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಚೀಟಿ, ಗ್ರಾಮ ಪಂಚಾಯಿತಿ ಒದಗಿಸುವ ಇನ್ನಿತರ ದಾಖಲೆ ಸಲ್ಲಿಸಿ ವಿದ್ಯುತ್ ಸಂಪರ್ಕ ಪಡೆಯಲು ವ್ಯವಸ್ಥೆ ಕಲ್ಪಿಸಿದ್ದು ವಿದ್ಯುತ್ ಸಂಪರ್ಕವಿಲ್ಲದ ಮನೆಗಳಿಗೆ ವಿದ್ಯುತ್ ಸೌಲಭ್ಯ ನೀಡಲಾಗಿದೆ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
100 ದಿನಗಳಲ್ಲಿ 1.2 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಸ್ವಾತಂತ್ರ್ಯ ದೊರೆತು 75 ವರ್ಷಗಳೇ ಕಳೆದರೂ ಲಕ್ಷಾಂತರ ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲವಾಗಿದೆ. ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕವಿಲ್ಲದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. 142.44 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗ್ತಿದೆ ಎಂದು ಹೇಳಲಾಗಿದೆ.