ಕಲಬುರ್ಗಿ ಜಿಲ್ಲೆ ಸೇಡಂ ತಾಲ್ಲೂಕಿನ ಲಿಂಗಪಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಶ್ರೀನಿವಾಸ ಕುಲಕರ್ಣಿ ವರ್ಗಾವಣೆಯಾಗಿದ್ದಾರೆ. ಅವರನ್ನು ಬೀಳ್ಕೊಡುವ ಸಂದರ್ಭದಲ್ಲಿ ಸಹೋದ್ಯೋಗಿ ಶಿಕ್ಷಕರು ಮತ್ತು ಮಕ್ಕಳು ಕಣ್ಣೀರಿಟ್ಟಿದ್ದಾರೆ.
9 ವರ್ಷಗಳಿಂದ ಈ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಶ್ರೀನಿವಾಸ ಕುಲಕರ್ಣಿ ಸೇಡಂ ಪದವಿಪೂರ್ವ ಕಾಲೇಜಿಗೆ ವರ್ಗಾವಣೆಗೊಂಡಿದ್ದಾರೆ. ಪ್ರೀತಿಪಾತ್ರರಾಗಿದ್ದ ಶಿಕ್ಷಕರಿಗೆ ಬೀಳ್ಕೊಡುಗೆ ನೀಡುವಾಗ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಣ್ಣೀರಿಟ್ಟಿದ್ದಾರೆ. ತಮ್ಮ ವ್ಯಕ್ತಿತ್ವದಿಂದಾಗಿ ಮಕ್ಕಳು, ಸಹೋದ್ಯೋಗಿಗಳು ಮತ್ತು ಗ್ರಾಮಸ್ಥರ ಪ್ರೀತಿಗೆ ಪಾತ್ರರಾಗಿದ್ದ ಶ್ರೀನಿವಾಸ ಅವರು ಕೂಡ ಮಕ್ಕಳು ಮತ್ತು ಸಹೋದ್ಯೋಗಿಗಳ ಅಳುವುದನ್ನು ಕಂಡು ಭಾವುಕರಾಗಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಶಿಕ್ಷಕರು, ಮಕ್ಕಳ ಬಾಂಧವ್ಯದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.