alex Certify BIG NEWS: ಬಿಪಿನ್ ರಾವತ್ ಬಗ್ಗೆ ಆಕ್ಷೇಪಾರ್ಹ ಪೋಸ್ಟ್; ಲ್ಯಾಬ್ ಟೆಕ್ನಿಷಿಯನ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಪಿನ್ ರಾವತ್ ಬಗ್ಗೆ ಆಕ್ಷೇಪಾರ್ಹ ಪೋಸ್ಟ್; ಲ್ಯಾಬ್ ಟೆಕ್ನಿಷಿಯನ್ ಅರೆಸ್ಟ್

ಬೆಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಡಿಎಸ್ ಬಿಪಿನ್ ರಾವತ್ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಖಾಸಗಿ ಲ್ಯಾಬ್ ನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಮೈಸೂರು ಮೂಲದ ಟಿ.ಕೆ.ವಸಂತ್ ಕುಮಾರ್ (40) ಬಂಧಿತ ಆರೋಪಿ. ಐಪಿಸಿ ಸೆಕ್ಷನ್ 505ರಡಿ ಎಫ್ ಐಆರ್ ದಾಖಲಿಸಲಾಗಿದೆ.

ಇಲ್ಲಿವೆ 2021 ರಲ್ಲಿ ಇಂಟರ್ ನೆಟ್ ನಲ್ಲಿ ಬಿರುಗಾಳಿ ಎಬ್ಬಿಸಿದ ಭಾರತದ ಟಾಪ್ 10 ವಿಡಿಯೋ

ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿ ಫೇಸ್ ಬುಕ್ ನಲ್ಲಿ ಕಿಡಿಗೇಡಿಗಳು ಪೋಸ್ಟ್ ಹಾಕಿದ್ದರು. ಈ ಕುರಿತು ಒಂದು ಪ್ರಕರಣ ಮಂಗಳೂರಿನಲ್ಲಿ ದಾಖಲಾಗಿತ್ತು. ಪ್ರಕರಣ ಸಂಬಂಧ ಕಾರ್ಕಳ ಮೂಲದ ಓರ್ವನನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು. ಇನ್ನೋರ್ವ ಆರೋಪಿ ಬೆಂಗಳೂರು ಮೂಲದವನಾಗಿದ್ದು, ಮತ್ತೋರ್ವನ ಸುಳಿವು ಸಿಕ್ಕಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತರು ಹೇಳಿಕೆ ನೀಡಿದ್ದರು. ಇದೀಗ ಇದೇ ಪ್ರಕರಣ ಸಂಬಂಧ ಲ್ಯಾಬ್ ಟೆಕ್ನಿಷಿಯನ್ ನನ್ನು ಬಂಧಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...