ಮುಜಾಫರ್ ಪುರ: ಜಸಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಕಾಮುಕ ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ.
ಬಾಲಕಿಯ ಮಾಹಿತಿ ಮೇರೆಗೆ ಎಸ್ಐ ಚಾಂದಿನಿ ಕುಮಾರಿ ಸವಾರಿಯಾ ಹಳ್ಳಿಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಹಲವರನ್ನು ವಿಚಾರಿಸಿ ಮಾಹಿತಿ ಪಡೆದಿದ್ದು, ಹುಡುಗಿ ಮಾಡಿದ ಆರೋಪ ನಿಜವೆಂದು ಕಂಡುಕೊಂಡಿದ್ದಾರೆ. ಕುಟುಂಬ ಸದಸ್ಯರಿಂದಲೂ ಮಾಹಿತಿ ಪಡೆಯಲಾಗಿದ್ದು, ಅವರು ಕೃತ್ಯ ನಡೆದಿರುವುದನ್ನು ಒಪ್ಪಿಕೊಂಡಿದ್ದಾರೆ.
ಆರೋಪಿಯನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ. ಬಳಿಕ ಆತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.
ಈ ಹಿಂದೆ ಹಲವು ಬಾರಿ ಆರೋಪಿ ಇಂತಹ ಕೃತ್ಯ ಎಸಗಿದ್ದಾನೆ. ಡಿಸೆಂಬರ್ 7 ರಂದು ಸಂಜೆ ಮತ್ತೆ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದು, ಆಕೆಯ ತಾಯಿ ಮತ್ತು ಸಂಬಂಧಿಕರ ಮೇಲೆ ಗಂಡನ ಮನೆಯವರು ಹಲ್ಲೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.