ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆ ಹಾಗೂ ಬಳ್ಳಾರಿ ಜಿಲ್ಲೆ ವ್ಯಾಪ್ತಿಯಲ್ಲಿ ಮೂರು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಲ್ಲಿಯೂ ಮೂರು ದಿನ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹೇಳಲಾಗಿದೆ.