ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಮಸೂದೆಯನ್ನು ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಘೋಷಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಸುನೀಲ್ ಕುಮಾರ್, ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ತರುತ್ತೇವೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮುಂದಿನ ದಿನಗಳಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆಯನ್ನೂ ತರುತ್ತೇವೆ. ಕಾಂಗ್ರೆಸ್ ಯಾಕೆ ಬೇಡ ಎಂದು ಹೇಳುತ್ತಿದೆ ಎಂಬುದನ್ನು ಹೇಳಲಿ ಎಂದರು.
ರೈಲು ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ಬುಕಿಂಗ್ ನಲ್ಲಿ ಟಿಕೆಟ್ ಖಾತ್ರಿಪಡಿಸಲು ಇಲ್ಲಿದೆ ಟಿಪ್ಸ್
ಇಂದಿನಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಮತಾಂತರ ನಿಷೇಧ ಕಾಯ್ದೆ ಮಸೂದೆ ಮಂಡನೆಗೆ ರಾಜ್ಯ ಸರ್ಕಾರ ಮುಂದಾಗಿರುವುದು ಭಾರಿ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.