2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು 2022 ರ ಜನವರಿ 31 ರವರೆಗೆ ವಿಸ್ತರಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಮೊದಲು ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನವಾಗಿತ್ತು. ಇದೀಗ ಅವಧಿಯನ್ನು ಜನವರಿ 31 ರವರೆಗೆ ವಿಸ್ತರಿಸಲಾಗಿದೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ವೆಬ್ಸೈಟ್ ವಿಳಾಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ಸೈಟ್ ವಿಳಾಸ www.bcwd.karnataka.gov.in/ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ ಮತ್ತು ಇಮೇಲ್ 8050770005/ 805077000 bcwd.scholarship@karnataka.gov.in ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmatrichelp@karnataka.gov.in ಮೊ.ಸಂ: 080-35254757 ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ