ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನವನ್ನು ಸರ್ಕಾರ ಬಿಡುಗಡೆ ಮಾಡಿದೆ.
1, 3 5 ನೇ ಸೆಮಿಸ್ಟರ್ ಪಾಠ ಮಾಡಲು ನೇಮಕವಾದ ಅತಿಥಿ ಉಪನ್ಯಾಸಕರಿಗೆ ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳ ಅವಧಿಗೆ ಒಟ್ಟು 28.29 ಕೋಟಿ ರೂಪಾಯಿ ಗೌರವಧನವನ್ನು ಕಾಲೇಜು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿ ಆದೇಶಿಸಿದೆ.
ಎನ್.ಇ.ಟಿ., ಕೆ –ಸೆಟ್, ಪಿ.ಹೆಚ್.ಡಿ. ಪದವಿ ವಿದ್ಯಾರ್ಹತೆ ಹೊಂದಿದ ಅತಿಥಿ ಉಪನ್ಯಾಸಕರಿಗೆ ತಲ 13,000 ರೂ., ಶೇಕಡಾ 55 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪೂರೈಸಿದ ಅತಿಥಿ ಉಪನ್ಯಾಸಕರಿಗೆ 11,000 ರೂ. ಗೌರವ ಧನ ಬಿಡುಗಡೆ ಮಾಡಲಾಗಿದೆ.
ಎಲ್ಲಾ ಅತಿಥಿ ಉಪನ್ಯಾಸಕರಿಗೆ ಗೌರವಧನ ಪಾವತಿ ಮಾಡಬೇಕು ಎಂದು ಸೂಚನೆ ನೀಡಲಾಗಿದ್ದು, ಪಾವತಿ ಮಾಡದ ದೂರುಗಳು ಬಂದಲ್ಲಿ ಕಾಲೇಜುಗಳ ಪ್ರಾಂಶುಪಾಲರು, ಸಂಬಂಧಿಸಿದವರನ್ನು ಹೊಣೆಗಾರರನ್ನಾಗಿ ಮಾಡಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಹೇಳಲಾಗಿದೆ.