ಬೆಂಗಳೂರು: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಡಿಸೆಂಬರ್ 8ರಂದು ತಮಿಳುನಾಡಿನ ಕುನೂರು ಬಳಿ ದುರಂತಕ್ಕೀಡಾಗಿತ್ತು. ಘಟನೆಯಲ್ಲಿ ರಾವತ್ ದಂಪತಿ ಸೇರಿದಂತೆ 13 ಜನರು ಸಾವನ್ನಪ್ಪಿದ್ದರು. ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವರುಣ್ ಸಿಂಗ್ ಬದುಕುಳಿದಿದ್ದರು.
BIG NEWS: ಪರಿಷತ್ ಚುನಾವಣೆಗೂ ಮುನ್ನ ರಾಜಕೀಯ ಬದಲಾವಣೆ ನಡೆದಿದೆ; ಎಲ್ಲವನ್ನೂ ವಿವರಿಸುತ್ತೇನೆ; ಹೊಸ ಬಾಂಬ್ ಸಿಡಿಸಿದ ರಮೇಶ್ ಜಾರಕಿಹೊಳಿ
ಗಾಯಾಳು ವರುಣ್ ಸಿಂಗ್ ಅವರನ್ನು ಮೊದಲು ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರು ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದರು. ಹಲವು ದಿನಗಳ ಚಿಕಿತ್ಸೆ ಬಳಿಕವೂ ಚಿಕಿತ್ಸೆ ಫಲಕಾರಿಯಾಗದೇ ವರುಣ್ ಸಿಂಗ್ ಕೊನೆಯುಸಿರೆಳೆದಿದ್ದಾರೆ.