ರೈತರು, ವಾಹನ ಸವಾರರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ ಎಥೆನಾಲ್ ಪಾಲಿಸಿ ಶೀಘ್ರ
ಬೆಳಗಾವಿ: ಎಥೆನಾಲ್ ನೀತಿ ಕುರಿತು ಸುವರ್ಣಸೌಧದಲ್ಲಿ ವಿಶೇಷ ಸಭೆ ನಡೆಸಲಾಗಿದೆ. ಎಥೆನಾಲ್ ಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿಶೇಷ ಸಭೆ ನಡೆಸಲಾಗಿದ್ದು, ಸಭೆಯ ಬಳಿಕ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿಕೆ ನೀಡಿ ಗೋವಿನ ಜೋಳ, ಭತ್ತ, ಕಬ್ಬು ಬೆಳೆಗಾರರನ್ನು ಸಬಲರನ್ನಾಗಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶವಿದೆ. ಪೆಟ್ರೋಲ್, ಡೀಸೆಲ್ ಗೆ ಪರ್ಯಾಯ ಇಂಧನ ಎಥೆನಾಲ್ ಆಗಿದೆ. ಎಥೆನಾಲ್ ಗೆ ಒಂದು ಪಾಲಿಸಿ ತರುವ ವಿಚಾರವಿದೆ. ಎಥೆನಾಲ್ ಬಳಕೆಯಿಂದ ರೈತರಿಗೆ, ಸರ್ಕಾರಕ್ಕೆ ಅನುಕೂಲವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚರ್ಚೆ ನಡೆಸಿ ಸರ್ಕಾರಕ್ಕೆ ವರದಿ ನೀಡಲಾಗಿದೆ. 30 ದಿನದಲ್ಲಿ ಜಾರಿಯಾಗುವ ನಿರೀಕ್ಷೆ ಇದೆ. ಪೆಟ್ರೋಲ್ ಮತ್ತು ಡೀಸೆಲ್ ಗೆ ಪರ್ಯಾಯವಾಗಿ ಎಥೆನಾಲ್ ಬಳಸಬಹುದು ಎಂದು ಸಭೆಯ ನಂತರ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದ್ದಾರೆ.