alex Certify BREAKING: ರಾಜ್ಯದಲ್ಲಿ ಇಂದು 303 ಜನರಿಗೆ ಕೊರೋನಾ ಪಾಸಿಟಿವ್, ಇಲ್ಲಿದೆ ಸಂಪೂರ್ಣ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿ ಇಂದು 303 ಜನರಿಗೆ ಕೊರೋನಾ ಪಾಸಿಟಿವ್, ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 303 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇಬ್ಬರು ಮೃತಪಟ್ಟಿದ್ದಾರೆ. 322 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,01,554 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,279 ಸೋಂಕಿತರು ಸಾವನ್ನಪ್ಪಿದ್ದು, 29,56,088 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 7158 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.23 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 197 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 135 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5630 ಸಕ್ರಿಯ ಪ್ರಕರಣಗಳಿವೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ, ಹಾವೇರಿ, ಕಲಬುರಗಿ, ಕೊಪ್ಪಳ, ರಾಮನಗರ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 197, ದಕ್ಷಿಣಕನ್ನಡ 15, ಕೊಡಗು 13, ಮೈಸೂರು 21 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಯಾವುದೇ ಸೋಂಕಿತರು ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...