ಬೆಂಗಳೂರು: ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನ ಪರಿಷತ್ ನಲ್ಲಿ ಪಿ.ಆರ್. ರಮೇಶ್ ಅವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಸ್ಮಾರ್ಟ್ ಸಿಟಿ, ಸ್ಮಾರ್ಟ್ ಪಾರ್ಕಿಂಗ್, ನಗರೋತ್ಥಾನ ಯೋಜನೆ, ಬೆಂಗಳೂರು ಮಿಷನ್ 2022, ಕೇಂದ್ರ ಸರ್ಕಾರದ ಯೋಜನೆಯಡಿ 10,830 ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಅನುದಾನ ನೀಡಿದ್ದು, ಕೇಂದ್ರ, ರಾಜ್ಯ ಸರ್ಕಾರದಿಂದ ತಲಾ 500 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿ ಪ್ರಮುಖ ರಸ್ತೆ ಕಾಮಗಾರಿ ನಿರ್ವಹಣೆ ಆಡಿಟ್ ಗೆ ಸೂಚನೆ ನೀಡಲಾಗಿದೆ. ಸ್ಮಾರ್ಟ್ ಪಾರ್ಕಿಂಗ್ ಗೆ 85 ಜಾಗ ಗುರುತಿಸಲಾಗಿದ್ದು, ಎಲ್ಇಡಿ ಲೈಟ್ ಅಳವಡಿಕೆ ಹಳೆ ಟೆಂಡರ್ ರದ್ದು ಮಾಡಲಾಗಿದೆ. ಆದಷ್ಟು ಬೇಗ ಹೊಸ ಟೆಂಡರ್ ಪ್ರಕ್ರಿಯೆ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದ್ದಾರೆ.