ನವದೆಹಲಿ: ಒಮಿಕ್ರಾನ್ ಪ್ರಕರಣಗಳ ಆರ್ಭಟದ ನಡುವೆ ದೇಶದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 7,447 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗಿದ್ದು ಒಂದೇ ದಿನದಲ್ಲಿ 391 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 476869 ಕ್ಕೆ ಏರಿಕೆಯಾಗಿದೆ.
ಹೋಟೆಲ್ ಗಳಲ್ಲಿ ಹಲಾಲ್ ಮಾಂಸದ ಬಗ್ಗೆ ಮಾಹಿತಿ ನೀಡಿ: ಪಂಜಾಬ್ ಸರ್ಕಾರಕ್ಕೆ ಅಲ್ಪಸಂಖ್ಯಾತರ ಆಯೋಗ ಪತ್ರ
ಇನ್ನು ದೇಶದಲ್ಲಿ 86415 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7886 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34162765 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 12,59,932 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 70,46,805 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,35,99,96,267 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.