ಬೆಂಗಳೂರು: ಅತ್ಯಾಚಾರ ಅನಿವಾರ್ಯವಾದರೆ ಆನಂದಿಸಿ ಎಂದು ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ಸೊಸೈಟಿ ಫಾರ್ ಸೆಕ್ಯೂರಿಂಗ್ ಜಸ್ಟಿಸ್ ಸಂಘಟನೆ ವತಿಯಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ದೂರು ನೀಡಲಾಗಿದೆ. ರಮೇಶ್ ಕುಮಾರ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.
ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನೆರೆ ಹಾನಿ ಚರ್ಚೆಯ ವೇಳೆ ಮಾತನಾಡುತ್ತಿದ್ದ ರಮೇಶ್ ಕುಮಾರ್, ಅಸಹಾಯಕತೆ ಬಗ್ಗೆ ಹೇಳಲು ಹೋಗಿ ಅತ್ಯಾಚಾರ ಅನಿವಾರ್ಯವಾದರೆ ಆನಂದಿಸಿ ಎಂಬ ಮಾತಿದೆ ಆ ರೀತಿಯಾಗಿದೆ ಎಂದು ಹೇಳಿದ್ದರು. ತಮ್ಮ ಹೇಳಿಕೆಯ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಕ್ಷಮೆಯಾಚಿಸಿದ್ದರು.