ನವದೆಹಲಿ: ದೆಹಲಿಯ ರೋಹಿಣಿ ಕೋರ್ಟ್ ನಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಡಿಆರ್ ಡಿಒ ವಿಜ್ಞಾನಿಯೋರ್ವರನ್ನು ಬಂಧಿಸಿದ್ದಾರೆ.
ಕೋರ್ಟ್ ಗೆ ವಿಚಾರಣೆಗೆ ಹಾಜರಾಗಬೇಕಿದ್ದ ವಕೀಲರನ್ನು ಹತ್ಯೆಗೈಯ್ಯಲು ಟಿಫಿನ್ ಬಾಕ್ಸ್ ನಲ್ಲಿ ಬಾಂಬ್ ಇಟ್ಟು ಸ್ಫೋಟಿಸಲಾಗಿತ್ತು. ಡಿಸೆಂಬರ್ 9ರಂದು ನಡೆದಿದ್ದ ಈ ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿ ಡಿಆರ್ ಡಿಒ ವಿಜ್ಞಾನಿಯನ್ನು ಬಂಧಿಸಲಾಗಿದೆ.
ಬಂಧಿತ ವಿಜ್ಞಾನಿ ವಕೀಲರನ್ನು ಕೊಲ್ಲಲೆಂದು ಬಾಂಬ್ ಇಟ್ಟಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಅಲ್ಲದೇ ಸ್ಫೋಟಕ್ಕೆ ಅಗತ್ಯವಿದ್ದ ವಸ್ತುಗಳನ್ನು ಆನ್ ಲೈನ್ ಮೂಲಕ ತರಿಸಿಕೊಂಡಿದ್ದಾಗಿಯೂ ತಿಳಿಸಿದ್ದಾನೆ ಎಂದು ತಿಳಿದುಬಂದಿದೆ.